ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Spread the love

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ‌ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಅದೂ ಮಹಿಳೆಯ ಮನೆಯಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮಹಿಳೆ ವಾಸವಿದ್ದ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.