ಹೊತ್ತಿ ಉರಿದ ಬಸ್: 20 ಮಂದಿ ಸಾವು

Spread the love

ಹೈದರಾಬಾದ್‌: ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಬಿದ್ದು‌ 20 ಮಂದಿ ಘೋರವಾಗಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದ್ದು, 20 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 21 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಕೆಳಗೆ ಬೈಕ್ ಕೆಳಗೆ ಸಿಲುಕಿಕೊಂಡು, ಕೂಡಲೇ ಬೆಂಕಿ ಹತ್ತಿಕೊಂಡಿದೆ.ತಕ್ಷಣ ಇಡೀ ಬಸ್ಸನ್ನು ಬೆಂಕಿಯ ಜ್ವಾಲೆ ಆವರಿಸ ಸುಟ್ಟು ಕರಕಲಾಗಿದೆ.

ಈ ಬೆಂಕಿ ಅವಘಡದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.