ಬೆಂಗಳೂರು: ಆರ್ಡರ್ ಮಾಡಿದ ವಸ್ತು ತಲುಪಿಸಲು ಬಂದ ಡೆಲಿವರಿ ಬಾಯ್ ಬ್ರೆಜಿಲ್ ಮೂಲದ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಆರ್‌ಟಿ ನಗರದಲ್ಲಿ ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ದಿನಸಿ ವಸ್ತುಗಳನ್ನು ತಲುಪಿಸಲು ಬಂದ ಬ್ಲಿಂಕಿಟ್ ಡೆಲಿವರಿ ಏಜೆಂಟ್, 21 ವರ್ಷದ ಬ್ರೆಜಿಲ್ ಮೂಲದ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಸಂತ್ರಸ್ತೆಯ ಉದ್ಯೋಗದಾತರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಕುಮಾರ್ ರಾವ್ ಪವಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೆಯೂ ಮುಂಬಯಯಲ್ಲಿ ಬ್ಲಿಂಕಿಟ್ ಡೆಲಿವರಿ ಬಾಯ್ ಹಣ ಪಡೆಯುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿತ್ತು.
ಬ್ರೆಜಿಲ್ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಅರೆಕಾಲಿಕ ಬ್ಲಿಂಕಿಟ್ ಡೆಲಿವರಿ ಏಜೆಂಟ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಾಡೆಲ್ ತಂಗಿದ್ದ
ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಡೆಲಿವರಿ ಬಾಯ್ ವರ್ತನೆ ಸೆರೆಯಾಗಿದ್ದು,ಆರ್.ಟಿ.ನಗರ ಪೊಲೀಸರು ಆತನನ್ನು ಬಂಧಿಸಿ ಪರಪ್ಪನ ಜೈಲಿಗೆ ಅಟ್ಟಿದ್ದಾರೆ
ಆರೋಪಿ ಕುಮಾರ್ ರಾವ್ ಪವಾರ್ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಬ್ಲಿಂಕಿಟ್‌ನಲ್ಲಿ ಅರೆಕಾಲಿಕ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಾಬಾಸಾಹೇಬ್ ನೇಮಗೌಡ ತಿಳಿಸಿದ್ದಾರೆ.

