ಆಂದ್ರಪ್ರದೇಶ,ನವೆಂಬರ್, ೧:
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಇಂದು ಏಕಾದಶಿ ಹಿನ್ನೆಲೆಯಲ್ಲಿ ಅತಿ ಹೆಚ್ಚು ಭಕ್ತ ಸಮೂಹ ಸೇರಿತ್ತು.ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆಯರ ನಡುವೆ ಮಾತಿಗೆ ಮಾತು ನಡೆದು ತಳ್ಳಾಟವಾಗಿದೆ.
ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಕ್ಕೂ ಮಂದಿ ಮೃತಪಟ್ಟಿದ್ದು,ಹಕವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ.
ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆಯಲ್ಲಿ ಬಂದು ಸೇರಿದ್ದರು ಈ ವೇಳೆ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

