ಮೈಸೂರು,ನವೆಂಬರ್. ೧: ನಗರದ ಓವೆಲ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಡಿ ಗೋಪಿನಾಥ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಂ.ಡಿ ಗೋಪಿನಾಥ್ ಅವರು
ಶಿಕ್ಷಣ ಕ್ಷೇತ್ರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅವರು ಮೈಸೂರು ನಗರದ
ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್ ಸಿ ಮಹದೇವಪ್ಪ ಅವರು ಎಂ ಡಿ ಗೋಪಿನಾಥ್ ರವರಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.

