ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅರಸು ಪ್ರತಿಮೆ‌ ಅನಾವರಣಕ್ಕೆ ಆಗ್ರಹ

Spread the love

ಮೈಸೂರು, ನ.2: ಮೈಸೂರಿನ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಶೀಘ್ರ ಅನಾವರಣಗೊಳಿಸಬೇಕೆಂದು ಒತ್ತಾಯಿಸಿ‌ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್, ಬಿಜೆಪಿ ನಗರ ಅಧ್ಯಕ್ಷ ಮತ್ತು ಮಾಜಿ ಶಾಸಕರು ಎಲ್.ನಾಗೇಂದ್ರ, ಮುಖಂಡರಾದ, ಹೇಮಾ ನಂದೀಶ್,ರಘು ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರು,ಅರಸು ಅಭಿಮಾನುಗಳು ಪಾಲ್ಗೊಂಡಿದ್ದರು.

ಮಾಜಿ ಮುಖ್ಯಮಂತ್ರಿಗಳು ಡಿ.ದೇವರಾಜ ಅರಸು ಅವರು ಮೈಸೂರು ಸೇರಿದಂತೆ ರಾಜ್ಯಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ,ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಬೇಕೆಂಬ‌ ಬೇಡಿಕೆ ಬಹಳ ದಿನಗಳಿಂದ ಇಟ್ಟಿದ್ದೇವೆ.ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಸು ಪ್ರತಿಮೆ ಶೀಘ್ರ ಅನಾವರಣಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.ಅರಸು‌ ಭಾವಚಿತ್ರಗಳು ಮತ್ತು ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು.

ಒಂದು ವೇಳೆ ಸರ್ಕಾರ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ನಾವೇ‌ ಅನಾವರಣ ಮಾಡುತ್ತೇವೆ ಎಂದು ಸವಾಲು ಹಾಕಿದರು.