ಮೈಸೂರು: ಮೈಸೂರಿನ ಉದ್ಬೂರು ಗೇಟ್ ಸಾಹಸಸಿಂಹ ಕರ್ನಾಟಕ ರತ್ನ ವಿಷ್ಣುವರ್ಧನ್ ಅವರ ಸ್ಮಾರಕಕ್ಕೆ ಅಭಿಮಾನಿಗಳ ಅನುಕೂಲಕ್ಕಾಗಿ 40,000 ರೂ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನು
ಜೀವದಾರ ರಕ್ತ ನಿಧಿ ಕೇಂದ್ರ ಕೊಡುಗೆ ನೀಡಿದೆ.
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಅವರು ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಗಿರೀಶ್, ಅಭಿಮಾನಿಗಳು ನೀರನ್ನು ಪೋಲು ಮಾಡದೆ ಹಿತಮಿತವಾಗಿ ಬಳಸುವ ಮೂಲಕ ನೀರನ್ನು ಸಂರಕ್ಷಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗದ ಅಧ್ಯಕ್ಷರಾದ ಎಂ ಡಿ ಪಾರ್ಥಸಾರಥಿ, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್,ಸ್ಮಾರಕ ಮೇಲ್ವಿಚಾರಕರಾದ ಸತೀಶ್, ರಕ್ಷಾ ಗಿರೀಶ್, ರಘು, ಸದಾಶಿವ್, ಪ್ರಭು, ಮಹದೇವ್, ಸಂತೋಷ್ ಮತ್ತಿತರರು ಹಾಜರಿದ್ದರು.
