ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Spread the love

ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು,ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು, ಆದರೆ ಯಾವುದೇ ವಾದ ಮಂಡನೆ ಮಾಡದೆ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಯಿತು.

ದರ್ಶನ್ ಪರ ವಕೀಲರು
ವಾದ ಮಂಡನೆಗೆ ಕಾಲಾವಕಾಶ ಕೇಳಿದ ಕಾರಣ ಪ್ರಕರಣದ ವಿಚಾರಣೆಯನ್ನು ಸೆ. 30ಕ್ಕೆ ಮುಂದೂಡಲಾಗಿದೆ.

ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

ಎಸ್​ಪಿಪಿ ಪ್ರಸನ್ನಕುಮಾರ್ ಅವರು ಮಾತನಾಡಿ, ನಾವು ಆಕ್ಷೇಪಣೆ ಸಲ್ಲಿಸಿಲ್ಲವೆಂದು ದರ್ಶನ್ ವಕೀಲರು ತಕರಾರು ತೆಗೆಯುತ್ತಿದ್ದರು, ಈಗ ಆಕ್ಷೇಪಣೆ ಸಲ್ಲಿಸಿದ್ದೇವೆ ವಾದ ಮಂಡನೆಗೆ ಸಿದ್ದ ಇದ್ದೇವೆ ಎಂದು ಹೇಳಿದರು.

ಪ್ರಕರಣ ಸಂಬಂಧ‌ ವಾದ ಮಂಡನೆಗೆ ಖುದ್ದು ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ಬರಬೇಕಿದೆ ಅವರು ಬಂದಿಲ್ಲ ಹಾಗಾಗಿ ಇನ್ನಷ್ಟು ದಿನದ ಕಾಲಾವಕಾಶ ಕೊಡಬೇಕೆಂದು ಅವರ ಸಹಾಯಕ ವಕೀಲರು ಕೇಳಿದರು.

ಹಾಗಾಗಿ ಸೆ. 30ಕ್ಕೆ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.