ಮೈಸೂರು: ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಸೆರೆ ಸಿಕ್ಕಿದೆ.
ಬೆಳಗಿನ ಜಾವ ಸುಮಾರು 4 ಗಂಟೆ ವೇಳೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಗಂಡು ಹುಲಿಯನ್ನು ಅರಣ್ಯ ಇಲಾಖೆಯವರಿಂದ ಸೆರೆಹಿಡಿಯಲಾಗಿದೆ.
ಕಳೆದ ಕೆಲ ವಾರಗಳಿಂದ ಹಂಚೀಪುರ, ಸಾಗರೆ,ದೇವಲಾಪುರ ಸುತ್ತಮುತ್ತಲಿನ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದರು.
ಹಲವು ದಿನಗಳ ಕಾರ್ಯಾಚರಣೆ ನಂತರ ಬೆಳಗ್ಗೆ ಹುಲಿಯನ್ನು ಸೆರೆ ಹಿಡಿಯಲಾಗಿದ್ದು, ಸಧ್ಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಪ್ರದೇಶದಲ್ಲೇ ಕಳೆದ ಕೆಲವು ತಿಂಗಳಲ್ಲಿ ಸುಮಾರು 16 ಹುಲಿಗಳನ್ನು ಸೆರೆಹಿಡಿಯಲಾಗಿದೆ.
