ಮೈಸೂರು: ಶಿಕ್ಷಣ ಎನ್ನುವುದು ಪ್ರತಿಯೊಂದು ಮಕ್ಕಳಿಗೆ ಸಿಗಬೇಕಾದ ಮೂಲಭೂತ ಹಕ್ಕು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ ಎಂದು ಕನಕದಾಸ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ. ರವಿಚಂದ್ರ ತಿಳಿಸಿದರು.
ಎಂ.ಜಿ. ರಸ್ತೆಯಲ್ಲಿರುವ ಸಿ.ಎಸ್.ಐ. ಬಾಯ್ಸ್ ಬೋರ್ಡಿಂಗ್ ಹೋಮ್ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್, ಲೇಖನಿ ಸಾಮಗ್ರಿ,ಹಣ್ಣು ಹಂಪಲು ವಿತರಿಸಿದ ವೇಳೆ ಅವರು ಮಾತನಾಡಿದರು.
ಮಕ್ಕಳು ಓದಿನಿ ಕಡೆ ಹೆಚ್ಚು ಗಮನ ಕೊಟ್ಟು ವಿದ್ಯಾವಂತರಾಗಬೇಕು. ಶಿಕ್ಷಣದ ಜೊತೆಯಲ್ಲಿ ಕಲೆ,ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು, ಯಾವ ಕ್ಷೇತ್ರದಲ್ಲಿ ಮಕ್ಕಳಿಗೆ ಒಲವಿದೆ ಅದನ್ನು ಗುರುತಿಸಿ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಇಂತಹ ಶಿಕ್ಷಣ ಸಿಕ್ಕಾಗ ಮಕ್ಕಳು ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬಂದು ದೇಶದ ಅತ್ಯುತ್ತಮ ಪ್ರಜೆಯಾಗಲಿದ್ದಾರೆ. ಹಾಗೆ ವಿದ್ಯಾರ್ಥಿಗಳು ಕೂಡ ತಾವು ಪಡೆದ ಶಿಕ್ಷಣವನ್ನು ಇನ್ನೊಬ್ಬರಿಗೆ ವಿದ್ಯಾದಾನ ಮಾಡಲು ಮುಂದಾಗಬೇಕೆಂದು ರವಿಚಂದ್ರ
ಕರೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್,ಸಿಂಚನಗೌಡ, ಬೋರ್ಡಿಂಗ್ ಹೊಮ್ ನ ದೇವ ರತ್ನ,ರಾಜೇಶ್ ಕುಮಾರ್,ಮಹೇಶ, ಶ್ರೀಧರ್, ಮಹದೇವಸ್ವಾಮಿ, ದತ್ತ ಮತ್ತಿತರರು ಹಾಜರಿದ್ದರು.
