ಮೈಸೂರು: .ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನದ ಪ್ರಯುಕ್ತ ಸೇವಾಕಾರ್ಯ ಹಮ್ಮಿಕೊಳ್ಳಲಾಯಿತು.
ನಗರದ ಸರಸ್ವತಿಪುರಂನಲ್ಲಿರುವ ಸಾನಿಧ್ಯ ವೃದ್ಧಾಶ್ರಮದ ಹಿರಿಯ ನಾಗರಿಕ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು ಹಂಪಲು ವಿತರಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಗೌರವ ನಮನ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಹಿರಿಯ ಕ್ರೀಡಾಪಟು ಮಹದೇವ್, ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ 69ನೇ ಮಹಾಪರಿ ನಿಬ್ಬಣ ದಿನವನ್ನು ಇಂದಿನ ಯುವಪೀಳಿಗೆ ಸ್ಮರಿಸಬೇಕು ಎಂದು ಹೇಳಿದರು.
ಅಂಬೇಡ್ಕರ್ ಅವರ ಆದರ್ಶ, ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಅವರು ನೀಡಿರುವ ಸಂವಿಧಾನ ಅಡಿಯಲ್ಲಿ ಎಲ್ಲರೂ ಶಾಂತಿಯುತವಾಗಿ ಸಹ ಬಾಳ್ವೆಯೊಂದಿಗೆ ಬಾಳಬೇಕು ಎಂದು ತಿಳಿಸಿದರು.
ಸ್ನೇಹ ಬಳಗವು ಸೇವಾ ಕಾರ್ಯದೊಂದಿಗೆ ಗೌರವ ನಮನ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ ಎಂದು ಹೇಳಿದರು.
ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಮಾತನಾಡಿ,ಡಾ. ಬಿ. ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಅಳವಡಿಸಿಕೊಂಡು ಬದುಕುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಮತದಾನದ ಹಕ್ಕನ್ನು ನೀಡಿರುವ ಈ ಆದರ್ಶ ಪುರುಷ ಭೌತಿಕವಾಗಿ ನಮ್ಮ ಜೊತೆ ಇಲ್ಲದೆ ಇರಬಹುದು ಆದರೆ ಅವರ ನಡೆದು ಬಂದ ಹಾದಿ ಅವರ ಆದರ್ಶ ವ್ಯಕ್ತಿತ್ವ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್,ಸಿಂಚನಗೌಡ (ಮಂಗಳಮುಖಿ), ವಿದ್ಯಾ, ಛಾಯಾ,ಗಾಯಕ ಯಶವಂತ್ ಕುಮಾರ್, ರಾಜೇಶ್ ಕುಮಾರ್, ಮಹೇಶ, ನಿರೀಕ್ಷಿತ್,ದತ್ತ ಮತ್ತಿತರರು ಹಾಜರಿದ್ದರು.
ಡಾ. ಬಿ ಆರ್ ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ-ಸೇವಾಕಾರ್ಯ