ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಚಿಕ್ಕಪ್ಪ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.
ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ.
ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿ ಆತ ಗುಂಡಿನ ದಾಳಿ ನಡೆಸಿದ್ದಾನೆ.
ಗಂಭೀರ ಗಾಯಗೊಂಡಿರುವ ಬ್ರಿಜೇಶ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಅಪ್ಪಚ್ಚು ಪುತ್ರ ಅಮೃತ್ ಎಂಬಾತ ಕೂಡ ಬಿಜ್ರೇಶ್ ಅವರ ತಂದೆ ಮಾಚಿಮಂಡ ರತನ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ
ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿದ ಚಿಕ್ಕಪ್ಪ!