ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಹರೀಶ್ ಗೌಡ ಚಾಲನೆ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಯಲಕ್ಷ್ಮಿ ಪುರಂನ ವಿ.ವಿ. ಹೆರಿಗೆ ಆಸ್ಪತ್ರೆಯಲ್ಲಿ ಈ ಬಾರಿಯ ಪೋಲಿಯೋ ಲಸಿಕಾ‌ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

2025ರ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಮಕ್ಕಳಿಗೆ ಪೋಲಿಯೋ ಹಾಕುವುದರ ಮೂಲಕ ಉದ್ಘಾಟಿಸಿದರು.
ಮೊದಲನೇ ದಿನದಲ್ಲಿ ಸುಮಾರು ಶೇ. 95 ರಷ್ಟು ಲಸಿಕೆಯನ್ನು ನೀಡಲಾಗುವುದು.

ಸುಮಾರು 1,600 ಕ್ಕೂ ಅಧಿಕ ಬೂತುಗಳಲ್ಲಿ ಲಸಿಕೆ ನೀಡಲಾಗುತ್ತಿದೆ. 4000 ಅಧಿಕ ಸಿಬ್ಬಂದಿ ವರ್ಗ, ವೈದ್ಯರು ಮತ್ತು ತಾಲೂಕು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳು ಲಸಿಕಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿ ಸಿ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತಕಾರರಾದ ಡಾ. ಸತೀಶ್, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳಾದ ಡಾ. ಮಹಮ್ಮದ್ ಶಿರಾಜ್ ಅಹಮದ್ ಮತ್ತಿತರು ಉಪಸ್ಥಿತರಿದ್ದರು.