ಮೈಸೂರು: ನಶೆ ಮುಕ್ತ ಕರ್ನಾಟಕ (ಮೈಸೂರು) ನಿರ್ಮಾಣಕ್ಕಾಗಿ ಒತ್ತಾಯಿಸಿ ಇದೆ ತಿಂಗಳು ಜನವರಿ ೧೨ ರಂದು ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳ ಜೊತೆಗೂಡಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಯುವ ಸೇನೆ ವೇದಿಕೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ನಾಯಕ್ ತಿಳಿಸಿದ್ದಾರೆ.
ನಶೆ ಮುಕ್ತ ಕರ್ನಾಟಕ (ಮೈಸೂರು) ನಿರ್ಮಾಣಕ್ಕಾಗಿ ಒತ್ತಾಯಿಸಿ ನಡೆಸುತ್ತಿರುವ ಸತ್ಯಾಗ್ರಹಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಹೇಶ್ ಹೇಳಿದ್ದಾರೆ.
ವಿವಿಧ ಸಂಘ ಸಂಸ್ಥೆಗಳ ಮತ್ತು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಶೆ ಮುಕ್ತ ಕರ್ನಾಟಕ (ಮೈಸೂರು) ನಿರ್ಮಾಣಕ್ಕಾಗಿ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
