ಮೈಸೂರು: ಟಿ ಕೆ ಬಡಾವಣೆಯಲ್ಲಿರುವ ಶ್ರೀ ಕೃಷ್ಣದಾಮಕ್ಕೆ ಧಾರ್ಮಿಕ ಕಾರ್ಯಕ್ರಮ ಪ್ರಯುಕ್ತ ಮೈಸೂರಿಗೆ ಆಗಮಿಸಿದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರನ್ನು
ಶಾಸಕ ಟಿ ಎಸ್ ಶ್ರೀವತ್ಸ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ರವಿಶಾಸ್ತ್ರಿ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ಬಿಜೆಪಿ ಮುಖಂಡರಾದ ಪ್ರದೀಪ್ ಕುಮಾರ್, ಕಡಕೋಳ ಜಗದೀಶ್, ರಂಗನಾಥ್, ಚೇತನ್ ಮತ್ತಿತರರು ಹಾಜರಿದ್ದರು.
