ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಹಸು ಮೇಲೆ ಹುಲಿ ದಾಳಿ ನಡೆಸಿದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿ ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದರು.
ಹುಣಸೂರು ತಾಲೂಕಿನ ಗುರುಪುರ ಬಳಿ ಹೊಸೂರು ಗೇಟ್ ಬಳಿ ಪ್ರತಿಭಟನೆ ನಡೆಸಿ,ಕೂಡಲೇ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದರು.
ಗೌಡನ ಕಟ್ಟೆ ಬಳಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹುಲಿ ದಾಳಿ ನಡೆಸಿದೆ.ಮಾಹಿತಿ ನೀಡಿದರೂ ಅರಣ್ಯಾಧಿಕಾರಿಗಳು ಬಂದಿಲ್ಲ ಎಂದು ಗ್ರಾಮಸ್ಥರು ವಾಗ್ದಾಳಿ ನಡೆಸಿದರು.
ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ
ನೀಡಿ ಗ್ರಾಮಸ್ಥರನ್ನು ಸಮಾಧಾನಪಡಿಸಿದರು.
