ಯಾದಗಿರಿ: ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ಯಾದಗಿರಿಯ ಗಂಜ್ ಪ್ರದೇಶದ ಹೈವೈ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಸಿಎಲ್ ಪಂದ್ಯ ಮುಗಿಸಿ ಹೈದ್ರಾಬಾದ್ ನಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ಬರುತ್ತಿದ್ದಾಗ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.
ಶುಕ್ರವಾರ ತಡರಾತ್ರಿ ಈ ಅಪಘಾತ ನಡೆದಿದ್ದು,ನೆರೆಯ ವಿಶಾಖಪಟ್ಟಣ ದಿಂದ ಸೆಲೆಬ್ರಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ ಹಿಂತಿರುವಾಗ ಅಪಘಾತ ಸಂಭವಿಸಿದೆ.
ನಗರದ ಗಂಜ್ ಪ್ರದೇಶದ ಹೈವೈ ರಸ್ತೆಯಲ್ಲಿ ಟ್ರಕ್ ಇವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ,ಇದರಿಂದ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಮುನ್ನುಗ್ಗಿದೆ,
ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ರಾಜೂ ಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಲಪ್ರಥಮ ಚಿಕಿತ್ಸೆ ಪಡೆದು ವಾಪಸ್ ಮನೆಗೆ ಮರಳಿ ವಿಶ್ರಾಂತಿ ಪಡೆದಿದ್ದಾರೆ.
