ಮೈಸೂರು: ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು, ಅವರ ಆದರ್ಶ, ವಿಚಾರಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ ಹೇಳಿದರು.
ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ ಶುಕ್ರವಾರ ಸೈನಿಕ ಅಕಾಡೆಮಿ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ನಡೆದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129ನೇ ಜನ್ಮದಿನದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಸಂದೇಶ್ ಸ್ವಾಮಿ ಮಾತನಾಡಿದವರು.
ವಿದ್ಯಾರ್ಥಿಗಳು ಹೆಚ್ಚು ರಾಷ್ಟ್ರೀಯ ಮನೋಭಾವ ದೇಶಪ್ರೇಮ, ವೈಚಾರಿಕವಾಗಿ ಚಿಂತಿಸಬೇಕು. ನೇತಾಜಿ ಅವರು ಹೇಳಿದಂತೆಯೇ ಪ್ರತಿಯೊಂದು ವಿಭಾಗದಲ್ಲೂ ನಡೆಯುವ ಅನ್ಯಾಯವನ್ನು ಪ್ರಶ್ನಿಸುವ ಗುಣ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೋಸ್ ಅವರ ವಿಚಾರಗಳು ಯುವಜನತೆಗೆ ಪ್ರೇರಣೆಯ ಕಥನಗಳಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ರಾಜೀರಹಿತ ಹೋರಾಟ ಮಾಡಿದ್ದರು. ತಮ್ಮ ಬಾಲ್ಯದಿಂದಲೂ ಇಡೀ ದೇಶದ ಜನರ ವಿಮುಕ್ತಿಗಾಗಿ, ಶೋಷಣೆಯಿಂದ ಹೋರಾಟ ಮಾಡಿದ್ದರು ಎಂದು ಸ್ಮರಿಸಿದರು.
ಎನ್ ಎಸ್ ಜಿ ಕಮಾಂಡೋ ಹಾಗೂ ಸೈನಿಕ ಅಕಾಡೆಮಿಯ ಸಂಸ್ಥಾಪಕರಾದ ಸಿ ಎಂ ಶ್ರೀಧರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ,ಬಿಜೆಪಿ ಮುಖಂಡ ಜೋಗಿ ಮಂಜು,ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್,ದೂರ ರಾಜಣ್ಣ,
ಸದಾಶಿವ್,ಆನಂದ್,ಪ್ರಭು,
ಮಮತಾ, ಶಿವು ಮತ್ತಿತರರು ಹಾಜರಿದ್ದರು.
30 ಕ್ಕೂ ಹೆಚ್ಚು ಮಂದಿ ಯುವಕರು ಶಿಬಿರದಲ್ಲಿ ರಕ್ತದಾನ ಮಾಡಿ ಮಾದರಿಯಾದರು.
