ತಿಪಟೂರು: ತಿಪಟೂರು ನಗರದ ಎಸ್ ವಿ ಪಿ ವಿದ್ಯಾ ಸಂಸ್ಥೆ ಆವರಣದಲ್ಲಿ ಜನವರಿ 31ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಕೆ ಟಿ ಶಾಂತಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ವಿದ್ಯೆ ಇದ್ದರೂ ಉದ್ಯೋಗವಿಲ್ಲದ ನಮ್ಮತಾಲೂಕಿನಲ್ಲಿ ನಿರುದ್ಯೋಗಿಗಳಿಗಾಗಿ ಇದು ಮೂರನೇ ಬಾರಿ ಪ್ರತಿಷ್ಠಿತ ಕಂಪನಿಗಳಿಂದ ಉದ್ಯೋಗ ಮೇಳವನ್ನು ನಡೆಸಲಾಗುತ್ತಿದೆ ಎಸ್ ಎಸ್ ಎಲ್ ಸಿ ಪಿಯುಸಿ ಡಿಪ್ಲೋಮೋ ಫಾರ್ಮರ್ಸಿ ಬಿಎ ಬಿಎ ಸೇರಿದೆ ಯಾವುದೇ ಪದವಿ ಹೊಂದಿದ್ದರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಈಗಾಗಲೇ 500ಕ್ಕೂ ಹೆಚ್ಚು ಜನ ನೋಂದಾವಣೆ ಮಾಡಿಕೊಂಡಿದ್ದಾರೆ, ಇನ್ನು ಮೂರು ದಿನ ಕಾಲಾವಕಾಶವಿದ್ದು ಆಸಕ್ತರು ನೊಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
80ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೆಳದಲ್ಲಿ ಭಾಗವಹಿಸಲಿವೆ, ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಅರ್ಹರಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಕೆ ಟಿ ಶಾಂತಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಸ್ವಾಮಿ, ರಾಜು, ನಟರಾಜು ಮತ್ತಿತರರು ಉಪಸ್ಥಿತರಿದ್ದರು.
