ಹುಬ್ಬಳ್ಳಿ: ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಪತಿ ಮೃತಪಟ್ಟರೆ ಪತ್ನಿ ಚಿಂತಾಜನಕ ವಾಗಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಯಾವದೊ ಕೆಲಸದ ನಿಮಿತ್ತ,ಸ್ಕೂಟಿಯಲ್ಲಿ ದಂಪತಿ ಹೊರಟಿದ್ದರು.ಎದುರಿನಿಂದ ಕಾರೊಂದು ಬಂದು ಸ್ಕೂಟಿಗೆ ಡಿಕ್ಕಿ ಹಿಡೆದಿದೆ.
ಡಿಕ್ಕಿಯಾದ ರಭಸಕ್ಕೆ ಸ್ಕೂಟಿ ಓಡಿಸುತ್ತಿದ್ದ ಪತಿ ಸ್ಥಳದಲ್ಲೆ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗುದೆದ.
ಸ್ಧಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಕಾರು ಚಾಲಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಕೂಡಲೇ ಕಾಮಾಗಾರಿ ಮುಗಿಸಿ ಎಂದು ಸ್ಥಳೀಯರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
