ಮೈಸೂರು: ಮೈಸೂರಿನ ಮಹಾರಾಣಿಯರ ವಿಜ್ಞಾನ ಮಹಿಳಾ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿ ಹಾಗೂ ವಿದ್ಯಾರ್ಥಿ ಕಲ್ಯಾಣ ಸಮಿತಿ ವತಿಯಿಂದ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ವಿಶೇಷ ಉಪನ್ಯಾಸ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಬ್ದುಲ್ ರಹಿಮಾನ್ ಅವರು ವಹಿಸಿದ್ದರು.
ಪ್ರೊ. ರಾಜೇಶ್ವರಿ,ಜೆ ಡಾ. ಪ್ರೀತಿ ಎನ್ ತಲ್ಲೂರು, ಪ್ರೊ. ಸುಧಾ ಎಂ. ಸಿ ಪ್ರೊ. ಲೀಲಾವತಿ, ಎನ್. ಕೆ, ಪ್ರೊ. ಶೋಭಾ ಹಾಗೂ ಡಾ. ನಮ್ರತಾ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ವಕೀಲರಾದ
ಮಂಜುಳಾ ಮಾನಸಾ ಅವರು ವರದಕ್ಷಿಣೆ ನಿಷೇಧ ಕಾಯ್ದೆಯ ಉದ್ದೇಶ, ಅದರ ಕಾನೂನು ಅಂಶಗಳು ಹಾಗೂ ಮಹಿಳೆಯರ ಹಕ್ಕುಗಳ ಕುರಿತು ವಿವರಿಸಿದರು.
ವರದಕ್ಷಿಣೆ ಯಂತಹ ಸಾಮಾಜಿಕ ಕೆಡುಕುಗಳ ಬಗ್ಗೆ ವಿದ್ಯಾರ್ಥಿನಿಯರು ಜಾಗೃತರಾಗಬೇಕು ಹಾಗೂ ಕಾನೂನಿನ ಅರಿವು ಹೊಂದುವುದು ಅತ್ಯವಶ್ಯಕ ಎಂದು ಅವರು ಒತ್ತಿ ಹೇಳಿದರು.
ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಅನ್ಯಾಯಗಳನ್ನು ತಡೆಯಲು ಕಾನೂನುಗಳ ಜ್ಞಾನ ಮತ್ತು ಧೈರ್ಯ ಅಗತ್ಯವೆಂದು ಮಂಜುಳಾ ಮಾನಸಾ ತಿಳಿಸಿದರು.
ಪ್ರಾಂಶುಪಾಲರಾದ ಪ್ರೊ. ಅಬ್ದುಲ್ ರಹಿಮಾನ್ ಎಂ, ಅವರು ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ ಎಂದು ಹೇಳಿದರು.
