ನವದೆಹಲಿ: ಆರು ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
ದೆಹಲಿಯ ಭಜನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆ ಆರೋಪಿಯು ತನ್ನ ಕುಟುಂಬದೊಂದಿಗೆ ನಾಪತ್ತೆಯಾಗಿದ್ದಾನೆ.
ಈ ಘಟನೆ ಜನವರಿ 18 ರ ಮಂಗಳವಾರ ನಡೆದಿದೆ,ಬಾಲಕಿಯ ಕುಟುಂಬವು ಪೊಲೀಸರಿಗೆ ತಡವಾಗಿ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಬಾಲಕಿಯನ್ನು ಪುಸಲಾಯಿಸಿ ಆಮಿಷ ಒಡ್ಡಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಬ್ಬರನ್ನು ಬಂಧಿಸಿ, ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ,ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ, ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದೆ, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಮೂರನೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
