ಮೈಸೂರು: ಮೈಸೂರಿನ ಪ್ರಥಮ ಮಹಿಳಾ ಪೋಲಿಸ್ ಕಮೀಷನರ್ ಸೀಮಾ ಲಾಟ್ಕರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪೋಲೀಸ್ ಪದಕ ಲಭಿಸಿರುವುದಕ್ಕೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಶುಭ ಕೋರಿದ್ದಾರೆ.
ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು 2026ರ ಗಣರಾಜ್ಯೋತ್ಸವದ ಅಂಗವಾಗಿ ಪ್ರತಿಷ್ಠಿತ ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಭಾಜನರಾಗಿದ್ದಾರೆ.
ಅವರಿಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ತುಂಬು ಹೃದಯದ ಶುಭಾಶಯಗಳನ್ನು ತಿಳಿಸಿದ್ದಾರೆ.
ಪೊಲೀಸ್ ಸೇವೆಯಲ್ಲಿನ ಅವರ ಅತ್ಯುತ್ತಮ ಸೇವೆ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಈ ಗೌರವ ನೀಡಿರುವುದು ಸಂತಸ ತಂದಿದೆ ಎಂದು ಅವರು ಹೇಳಿದ್ದಾರೆ.
2026ರ ಗಣರಾಜ್ಯೋತ್ಸವ ದಿನಾಚರಣೆ
ಹಿನ್ನೆಲೆ ಕರ್ನಾಟಕದ ವಿವಿಧ ಪೊಲೀಸ್ ಅಧಿಕಾರಿಗಳೊಂದಿಗೆ ಸೀಮಾ ಲಾಟ್ಕರ್ ಅವರಿಗೆ ಮೆರಿಟೋರಿಯಸ್ ಸರ್ವಿಸ್ಗಾಗಿ
ಈ ಗೌರವ ಲಭ್ಯವಾಗಿದೆ.
ಸೀಮಾ ಲಾಟ್ಕರ್ ಅವರು ಮೈಸೂರು ಪೊಲೀಸ್ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ದಕ್ಷ ಆಡಳಿತಕ್ಕಾಗಿ ಹೆಸರುವಾಸಿಯಾಗಿದ್ದಾರೆ.
ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪೋಲೀಸ್ ಪದಕ ದೊರೆತಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
