ಮೈಸೂರು: ಖಚಿತ ಮಾಹಿತಿ ಮೇರೆಗೆ ಮೈಸೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಫೆ.3 ರಂದು ಉದಯಗಿರಿ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಬಳಿ
ಪೊಲೀಸರು ಅಮೀರ್ ಖಾನ್,ಸೈಯದ್ ಇಮ್ರಾನ್ ಮತ್ತು ಮಹಮ್ಮದ್ ನಬೀಲ್ ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 1,20,000 ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ತೂಕದ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ವಶ ಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಮೂರು ಆರೋಪಿಗಳ ಪೈಕಿ ಅಮೀರ್ ಖಾನ್ ವಿರುದ್ಧ ಈ ಹಿಂದೆ ಕೂಡ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ. ಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
