ಮೈಸೂರು: ಡ್ರಗ್ಸ್ ನಂತೆಯೇ ಕ್ರಿಕೆಟ್ ಬೆಟ್ಟಿಂಗ್ ಕೂಡ ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು ಅಂತವರನ್ನು ಗುರುತಿಸಿ ಮೈಸೂರಿ ನಿಂದ ಗಡಿಪಾರು ಮಾಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
ಯುವಕ ಯುವತಿಯರು ಈ ಬೆಟ್ಟಿಂಗ್ ನಲ್ಲಿ ಹೆಚ್ಚಾಗಿ ತೊಡಗಿಸಿ ಕೊಂಡಿದ್ದು ಜೀವನವನ್ನು ನಾಶಮಾಡಿ ಕೊಳ್ಳುತ್ತಿದ್ದಾರೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಸಮಾಜ ಘಾತುಕ ಶಕ್ತಿಗಳು ಯುವ ಸಮುದಾಯವನ್ನು ಗುರಿಯಾಗಿಸಿ ಕೊಂಡು ಈ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿಸಿ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈಗಾಗಲೇ ಎಷ್ಟೋ ಜನರು ಈ ಮಾಯಾಜಾಲಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ ಎಂದು ತೇಜಸ್ವಿ ಹೇಳಿದ್ದಾರೆ.
ಈ ಕ್ರಿಕೆಟ್ ಬೆಟ್ಟಿಂಗ್ ಕೂಡ ಡ್ರಗ್ಸ್ ಮಾದರಿಯಲ್ಲೇ ತಂಡ ರಚನೆಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಆಯಾ ಠಾಣೆಯ ಮಟ್ಟದಲ್ಲಿ ಇರುವ ಸಮಾಜ ಸೇವಕರು ಮತ್ತು ಹೋರಾಟಗಾರರುಗಳನ್ನು ವಿಶ್ವಾಸಕ್ಕೆ ಪಡೆದು ಸ್ಥಳೀಯ ಮಟ್ಟದಲ್ಲಿ ನಡೆಯುವ ಬೆಟ್ಟಿಂಗ್ ದಂಧೆಕೋರರ ( ಬುಕ್ಕಿ )ಮಾಹಿತಿಗಳನ್ನು ಪಡೆದು ಅಂತವರ ಚಲನವಲನಗಳ ಮೇಲೆ ಪೋಲಿಸ್ ಇಲಾಖೆ ಸೂಕ್ಷ್ಮವಾಗಿ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ.
ಮೈಸೂರಿನಿಂದ ಬೆಟ್ಟಿಂಗ್ ದಂಧೆಕೋರರನ್ನು ಗಡಿಪಾರು ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
