ಮೈಸೂರು: ಮೈಸೂರು ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಡಾ ಸಿ ಸೋಮಶೇಖರ್ ಅವರಿಗೆ ಕನ್ನಡ ಜಾನಪದ ಪರಿಷತ್ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಗೌರವಿಸಿ ಅಭಿನಂದಿಸಿದರು.
ಧಾರವಾಡ ಕನ್ನಡ ಜಾನಪದ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸದಾನಂದ ಎಂ, ಬೆಂಗಳೂರು ಉತ್ತರ ತಾಲೂಕು ಕನ್ನಡ ಜಾನಪದ ಪರಿಷತ್ ಯುವ ಘಟಕದ ಅಧ್ಯಕ್ಷ ಮುನಿಕುಮಾರ ಹಾಜರಿದ್ದರು.
