ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕಟ್ಟಾ ಅಭಿಮಾನಿಗಳು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದಂದು ಪ್ರತಾಪ್ ಸಿಂಹ ರವರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾಗಲೆಂದು ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಪ್ರಾರ್ಥಿಸಿದ್ದಾರೆ.
ಜೆಡಿಎಸ್ ಎಸ್ ಸಿ ಘಟಕದ ಅಧ್ಯಕ್ಷರು ಭೀಮರಾಜ್, ಪ್ರತಾಪ್ ಸಿಂಹ ಅವರ ಅಭಿಮಾನಿ ಗಳಾದ ಚರಣ್, ದೇವರಾಜ್, ರಾಜೇಶ್, ಶರತ್, ಕನಕರತ್ನ, ಪುಣ್ಯವತಿ, ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.
