ಮೈಸೂರು: ಮೈಸೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸರಾಗವಾಗಿ ನಡೆಯಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿ, ವಿದ್ಯಾರ್ಥಿ ಸ್ನೇಹಿ ಪೂರಕ ವಾತಾವರಣ ನಿರ್ಮಿಸಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು,ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಸುವಂತೆ ಸಲಹೆ ನೀಡಿದರು.
ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತಂದುಕೊಡಬೇಕು, ವಿದ್ಯಾರ್ಥಿಗಳಿಗೆ ಅಗತ್ಯ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಎಸ್.ಪಿ., ಡಿಡಿಪಿಯು, ತಹಶೀಲ್ದಾರರು, ಪ್ರಿನ್ಸಿಪಾಲರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
