ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧ ಪ್ರಾರಂಭವಾಗಿದೆ.
ಆದರೆ ಎರಡೂ ದೇಶಗಳು ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಿದ್ದಾರೆ.ತಮ್ಮನ್ನ ತಾವು ಸಮರ್ಥಿಸಿಕೊಳ್ಳುತ್ತಿವೆ.
55 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರನ್ನು ಸೆರೆಹಿಡಿಯಲಾಗಿದೆ. ನಮ್ಮ ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಹೇಳಿದೆ.
ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ,
ಇತ್ತ ಪಾಕಿಸ್ತಾನ ಕೂಡ ತರಾತುರಿಯಲ್ಲಿ ಮತ್ತೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಅಫ್ಘಾನ್ ಸೈನಿಕರ ದಾಳಿಯ ನಂತರ, ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾದಲ್ಲಿನ ತಾಲಿಬಾನ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿದ್ದೇವೆ ಎಂದು ಪಾಕ್ ಹೇಳಿದೆ.
ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿತು.ಅಫ್ಘಾನಿಸ್ತಾನ ಕೂಡಾ ಇದಕ್ಕೆ ಬಲವಾಗಿ ಪ್ರತಿದಾಳಿ ನಡೆಸಿದೆ.
ಇದು ಪಾಕಿಸ್ತಾನವನ್ನು ಕೆರಳಿಸಿದೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಮಧ್ಯರಾತ್ರಿ ಬಾಂಬ್ ದಾಳಿಯನ್ನು ನಡೆಸಿದೆ. ಪಾಕಿಸ್ತಾನವು ಅಫ್ಘಾನ್ ತಾಲಿಬಾನ್ ಆಡಳಿತದ ವಿರುದ್ಧ ಆಪರೇಷನ್ ಗಜಬ್ ಲಿಲ್ ಹಕ್ ಪ್ರಾರಂಭಿಸಿದೆ.
ರಾತ್ರಿಯಿಡೀ ನಡೆದ ವಾಯುದಾಳಿಯ ಮೂಲಕ ಅಫ್ಘಾನಿಸ್ತಾನದಲ್ಲಿ 130 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.ಈಗ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ.
ಇಬ್ಬರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಹೇಳಿದ್ದಾರೆ. 36 ಅಫ್ಘಾನ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಒಟ್ಟಾರೆ ಯುದ್ದ ನಡೆದಿರುವುದಂತೂ ಸತ್ಯ.
