ಬೆಳಗಾವಿ: ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.
ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಬೆಳಿಗ್ಗೆ ಆಗಮಿಸಿದರು.
ಈ ವೇಳೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್,ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸಿ.ಪಿ.ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
