ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ.
ಬೆಂಗಳೂರಿನ 4 ಕಡೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಮಾಡಿಭ್ರಷ್ಟರಿಗೆ ಶಾಕ್ ನೀಡಿದೆ.
ಕೆಆರ್ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ ನಾಯಕ್, ಬಿಡಿಎ ವ್ಯಾಪ್ತಿಯ ಆರ್ಎಫ್ಓ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಒ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.
ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್ ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಕೆ.ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ ಸತ್ಯನಾರಾಯಣ, ಮೈಸೂರಿನ ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಎಇ ಮತ್ತು ಇಇ ಆಸಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಇಂಜಿನಿಯರ್ ಪ್ರಕಾಶ್ ಪಿ.ಜಿ ಅವರುಗಳ ಮನೆಗಳ ಮೇಲೂ ಲೋಕಾಯುಕ್ತದವರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
