ರಣ್ವೀರ್ ಸಿಂಗ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್ 2’ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದಗದು ಫ್ಯಾನ್ಸ್ ಫುಲ್ ಖುಷ್.
ಈಗ ಸುದ್ದಿ ಏನಂದರೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿರೋದು.
ರಣವೀರ್ ಸಿಂಗ್ ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಫಸ್ಟ್ ಪಾರ್ಟ್ ದಾಖಲೆಯ ಗೆಲುವು ಕಂಡಿದ್ದಾಗಿದೆ.ಈಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ.
ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಟ್ರೈಲರ್ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಲೇ ಇದ್ದಾರೆ.
ಮಾರ್ಚ್ 3 ಕ್ಕೆ ಟ್ರೈಲರ್ ಬಿಡುಗಡೆ ಆಗಬೇಕಿತ್ತು ಆದರೆ ಕಾರಣಾಂತರಗಳಿಂದ ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೆ.
ನಾಳೆ ಅಂದರೆ ಮಾರ್ಚ್ 7 ಶನಿವಾರ ಬೆಳಿಗ್ಗೆ 11:01 ಕ್ಕೆ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದ್ಸು ಅಭಿಮಾನಿಗಳು ಫುಲ್ ಖುಷ್.
ಈ ಬಗ್ಗೆ ರಣವೀರ್ ಸಿಂಗ್ ಸೇರಿದಂತೆ ಸಿನಿಮಾಕ್ಕೆ ಸಂಬಂಧಿಸಿದ ಇತರೆ ಕೆಲವರು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಣ್ವೀರ್ ಸಿಂಗ್, ಜೊತೆಗೆ ಸಂಜಯ್ ದತ್, ಅರ್ಜುನ್ ರಾಂಪಾಲ್, ಮಾಧವನ್ ಹಾಗೂ ಅಕ್ಷಯ್ ಖನ್ನಾ ಅಂತಹ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿದ್ದಾರೆ. ಈ ಚಿತ್ರವು ಕನ್ನಡ ಸೇರಿದಂತೆ ಪಂಚಭಾಷೆಗಳಲ್ಲಿ ಮಾರ್ಚ್ 19 ರಂದು ತೆರೆಕಾಣಲಿದ್ದು ತೀವ್ರ ಕುತೂಹಲ ಕೆರಳಿಸಿದೆ.
