ಬೆಳಗಾವಿ: ಅಮೆರಿಕ,ಇಸ್ರೇಲ್, ಇರಾಕ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮಾರ್ಗಸೂಚಿಯಂತೆ ಈ ಘೋಷಣೆ ಮಾಡಲಾಗಿದೆ.
ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್ಮ್ಯಾನ್ಡ್ ಏರಿಯಲ್ ವಾಹನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರೆಡ್ ಝೋನ್ ಮತ್ತು ಯೆಲ್ಲೋ ಝೋನ್ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ಎಚ್ಚರಿಸಿದ್ದಾರೆ.
ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
