ಮೈಸೂರು: ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿ ಹಾಗೂ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನ ವತಿಯಿಂದ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಎಲ್ಲ ಮಹಿಳೆಯರಿಗೆ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಚೈತ್ರ ಅವರು ಎಲ್ಲಾ ಮಹಿಳೆಯರೊಂದಿಗೆ ಸೇರಿ ಉದ್ಘಾಟನೆ ಮಾಡಿದರು.
ನೂರುಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಪಿ ಜಿ ಆರ್ ಎಸ್ ಎಸ್ ಪವಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ದೇಶಕರು ಪಾಲ್ಗೊಂಡಿದ್ದರು.
