ನಂಜನಗೂಡು: ಮಹಿಳೆಯರು ಕುಟುಂಬದ ಬೆಳಕು ಹಾಗೂ ಸಮಾಜದ ಶಕ್ತಿಯಾಗಿದ್ದಾರೆ
ಎಂದು ಚಿನ್ನದಪದಕ ಪುರಸ್ಕೃತರಾದ ಪೂಜಾ ಲಿಂಗಣ್ಣ ಸ್ವಾಮಿ ಹೇಳಿದರು.
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂಎ ಅರ್ಥಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ ಪಡೆದ ಹಿನ್ನೆಲೆಯಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ ಪೂಜಾ ಲಿಂಗಣ್ಣಸ್ವಾಮಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಮಹಿಳೆಯರು ಶಿಕ್ಷಣ, ಆರೋಗ್ಯ, ವಿಜ್ಞಾನ, ಕ್ರೀಡೆ, ಆಡಳಿತ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.
ಮಹಿಳೆಯರಿಗೆ ಸಮಾನ ಅವಕಾಶಗಳು ದೊರೆತಾಗ ಸಮಾಜದಲ್ಲಿ ಸಮಾನತೆ ಹಾಗೂ ಪ್ರಗತಿ ಸಾಧ್ಯವಾಗುತ್ತದೆ ಎಂದು ಪೂಜಾ ಲಿಂಗಣ್ಣಸ್ವಾಮಿ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್ ಮಾತನಾಡಿ, ಮಹಿಳೆಯರ ಸಬಲೀಕರಣವೇ ಸಮೃದ್ಧ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಆಧಾರವಾಗಿದ್ದು, ಮಹಿಳೆಯರ ಶಿಕ್ಷಣ, ಆರೋಗ್ಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಲಹೆ ನೀಡಿದರು.
ಕಾಲೇಜಿನ ಎಲ್ಲಾ ಮಹಿಳಾ ಉಪನ್ಯಾಸಕರು ಮತ್ತು ಮಹಿಳಾ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ರಂಗಸ್ವಾಮಿ, ಸ್ವಾಗತ ಲಿಂಗಣ್ಣ ಸ್ವಾಮಿ ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ದಿನೇಶ್ ಅವರು ಮಾಡಿದರು.
ಕಾರ್ಯಕ್ರಮದಲ್ಲಿ ಜಯಪ್ರಕಾಶ್ ,ಎಂ.ಎಂ ಮಹದೇವ್, ಅಶ್ವಥ ನಾರಾಯಣಗೌಡ ,ಬಿ.ಎಸ್ ನಾಗರಾಜ, ಪಟ್ಟದ ಶಿವಕುಮಾರ್, ಸೋಮಶೇಖರ್, ಗಿರೀಶ್, ಉಮಾ ಮಹೇಶ್ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
