ಯಾದಗಿರಿ: ಮಂಗಳವಾರ ರಾತ್ರಿ ಸುರಿದ ಆಲಿ ಕಲ್ಲು ಮಳೆಗೆ ಜಿಲ್ಲೆಯ ವಡಿಗೇರ ತಾಲೂಕಿನ ಚನ್ನೂರು ಜೆ ಗ್ರಾಮದಲ್ಲಿ 150ಕ್ಕೂ ಹೆಚ್ಚು ಎಕರೆ ಬತ್ತ ಹಾಗೂ ಜೋಳ ಬೆಳೆ ಸಂಪೂರ್ಣ ನೀರು ಪಾಲಾಗಿದೆ.
ಮುಂಗಾರು ಬೆಳೆ ಸಮಯದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಭೀಮ ಮತ್ತು ಕೃಷ್ಣಾ ನದಿಗಳ ಪ್ರವಾಹದಿಂದ ಅಪಾರ ಬೆಳೆ ನಷ್ಟವಾಗಿತ್ತು.
ರೈತರು ಲಕ್ಷಾಂತರ ರೂಪಾಯಿ ಸಾಲ ಮಾಡಿ ಭತ್ತ ಹಾಗು ಚೋಳ ಬಿತ್ತನೆ ಮಾಡಿದ್ದರು. ಇನ್ನೊಂದು ತಿಂಗಳಲ್ಲಿ ಬೆಳೆ ಕಟಾವಿಗೆ ಬರುತಿತ್ತು ಆದರೆ ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟವಾಗಿ ರೈತರು ಕಂಗಾಲಾಗಿದ್ದಾರೆ.
ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಸೂಕ್ತ ಪರಿಹಾರ ನೀಡುವ ಅಗತ್ಯವಿದೆ.
