ಮೈಸೂರು: ಯುಗಾದಿ ಹಬ್ಬದ ಪ್ರಯುಕ್ತ ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ತೈಲಾಭಿಷೇಕ, ವಿಶೇಷ ಧ್ರವಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.
ನಂತರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿ,ತೀರ್ಥ,ಪ್ರಸಾದ ವಿನಿಯೋಗ ಮಾಡಲಾಯಿತು.
ನಂತರ ಪಂಚಾಂಗ ಶ್ರಾವಣ ಮಾಡುವ ಮೂಲಕ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದರು.
ತದ ನಂತರ ಭಕ್ತಾದಿಗಳಿಗೆ ಬೇವು-ಬೆಲ್ಲ ಹಾಗೂ ಪ್ರಸಾದ ವಿತರಿಸಿದರು.
