ಮೈಸೂರು: ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶ್ವ ಜಲ ದಿನಾಚರಣೆ ಅಂಗವಾಗಿ ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಚಾಮುಂಡಿಪುರಂ, ಅಪೂರ್ವ ಹೋಟೆಲ್ ಸಭಾಂಗಣ ಮುಂಭಾಗ
ಮಾರ್ಚ್ 23ರಂದು ಬೆಳಗ್ಗೆ 8.30ಕ್ಕೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಎಂದು ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ನಗರಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಮತ್ತಿತರರು ಭಾಗವಹಿಸಲಿದ್ದಾರೆ.
