ಮೈಸೂರು: ಇದೇ ಮಾರ್ಚ್ 3, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೈಸೂರು-ಹುಣಸೂರು ಮುಖ್ಯ ರಸ್ತೆ ಕೃಷ್ಣ ಬೇಕರಿ ಹತ್ತಿರ ಪಿ ಜಿ ಆರ್ ಎಸ್ ಎಸ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡರು ಮತ್ತು ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಗುರುಗಳು ಮತ್ತು ಹಲವಾರು ಗಣ್ಯರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪಿ ಜಿ ಆರ್ ಎಸ್ ಎಸ್ ರಾಜ್ಯಾಧ್ಯಕ್ಷರಾದ ಯಾದವ್ ಹರೀಶ್ ಅವರು ತಿಳಿಸಿದ್ದಾರೆ.
ಶುಕ್ರವಾರ ಕಾರ್ಯಕ್ರಮದ ಪೋಸ್ಟರ್ ಗಳನ್ನು ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಗುರುಗಳು ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.
ಈ ವೇಳೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೈತ್ರ, ಖಜಾಂಚಿ ಮಂಜುಳಾ, ಗೌರವಾಧ್ಯಕ್ಷರಾದ ಸವಿತಾ ಸಹಕಾರದರ್ಶಿ ಅಶ್ವಿನಿ, ರಾಜ್ಯ ಚಾಲಕರಾದ ರಕ್ತದಾನಿ ಮಂಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಣಿ, ನಿರ್ದೇಶಕರಾದ ಲತಾ, ಹರ್ಷ ಮತ್ತಿತರರು ಹಾಜರಿದ್ದರು.
