ಮೈಸೂರು: ಜಿಲ್ಲೆಯ ಹುಣಸೂರು ತಾಲೂಕು ರತ್ನಪುರಿ-ದಾಸನಪುರ ಮದ್ಯೆ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಭಾರಿ ಪ್ರಮಾಣದ ಸಿಂತೆಟಿಕ್ಸ್ ಡ್ರಗ್ಸ್ ಇಟ್ಟಿದ್ದನ್ನು ಹುಣಸೂರು ಪೊಲೀಸರು ಪತ್ತೆಹಚ್ಚಿದ್ದಾರೆ.
ಆರೋಪಿಗಳು ಡ್ರಗ್ಸ್ ಗಳನ್ನು ಪ್ಯಾಕ್
ಮಾಡುತ್ತಿದ್ದಾಗಲೇ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹುಣಸೂರು ನಗರದ ರಹಮತ್ ಮೊಹಲ್ಲಾದ ಇರ್ಫಾನ್ ಎಂಬುವರ ತೋಟದಲ್ಲಿ ಈ ಕೃತ್ಯ ನಡೆದಿದೆ.
ಸುಮಾರು 12 ಕೋಟಿ ಬೆಲೆಯ ೨೫ ಕೆ.ಜಿ.ಗೂ ಹೆಚ್ಚು ಸಿಂತೆಟಿಕ್ಸ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತೋಟದ ಮಾಲಿಕ ಹುಣಸೂರಿನ ಇರ್ಫಾನ್ ಹಾಗು ಮೈಸೂರಿನ ಇರ್ಫಾನ್ ಎಂಬಾತ ಸೇರಿಕೊಂಡು ಈ ಕೃತ್ಯ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಸಂಜೆ ಪೊಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಸಿನಿಮೀಯ ಮಾದರಿಯಲ್ಲಿ ಸುಮಾರು ೧೦ಕಿ.ಮೀ.ವರೆಗೆ ಚೇಸ್ ಮಾಡಿ ನಗರಕ್ಕೆ ಸಮೀಪದ ಸಲೀಂ ಪ್ಯಾಲೆಸ್ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾಧ್ಯಮ ಗೋಷ್ಠಿಯಲ್ಲಿ ವಿವರ ನೀಡಿದರು.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೋಟದ ಮಾಲಿಕ ಇರ್ಫಾನ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ ಎಂದು ಎಸ್ ಪಿ ತಿಳಿಸಿದ್ದಾರೆ.
ರತ್ನಪುರಿ ಲಾಡ್ಜ್ ಒಂದರಲ್ಲಿ ನಾಲ್ಕು ಮಂದಿ ಕೆಲದಿನಗಳಿಂದ ಹೊರ ರಾಜ್ಯದಿಂದ ಬಂದು ರೂಂ ಮಾಡಿಕೊಂಡಿದ್ದರು ಪೊಲೀಸರು ತೋಟಕ್ಕೆ ದಾಳಿ ನಡೆಸಿದ ವಿಷಯ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ.
