ಕೇರಳ/ಕಣ್ಣೂರು: ಕರ್ನಾಟಕ ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿ ಎಂದು ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೇರಳದ ಕಣ್ಣೂರಿನ ಮಾಡೇಕವ್ ಭದ್ರಕಾಳಿ ಅಮ್ಮನವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯರಾದ ನಟರಾಜ್, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಯಶಸ್ವಿ ಆಡಳಿತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೋಡೆತ್ತುಗಳ ರೀತಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಬಡವರ ಶೋಷಿತರ ಹಾಗೂ ಹಿಂದುಳಿದ ವರ್ಗದವರ ಪರ ಗಟ್ಟಿ ದ್ವನಿಯಾಗಿ ನಿಂತು ಜನಪರ ಕಾಳಜಿಯೊಂದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾರಂಟಿಗಳ ಜೊತೆ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡಿ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ, ಹಾಗಾಗಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸುವುದರಲ್ಲಿ ಯಾವುದೇ ರೀತಿಯ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವು ಕಾಂಗ್ರಸ್ ಗೆಲುವಿಗೆ ತಾಯಿಯ ಸನ್ನಿಧಾನದಲ್ಲಿ ವಿಶೇಷ ಪೂಜೆ ಕೂಡ ಸಲ್ಲಿಸಿದ್ದೇವೆ ಎಂದು ಹೇಳಿದರು.
ನಜರಬಾದ್ ನಟರಾಜ್ ಅವರಿಗೆ ಚೇರ್ ಮ್ಯಾನ್ ಶಿವನಂಜೇಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಎಪಿಎಂಸಿ ರಾಮಚಂದ್ರು, ಜಯಪ್ರಕಾಶ್ ಗುರೂಜಿ, ಮಂಡಕಳ್ಳಿ ನಾಗರಾಜು ಹಾಗೂ ಎಸ್ ಎನ್ ರಾಜೇಶ್ ಸಾಥ್ ನೀಡಿದರು.
