ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾನೆ.
ಆತನ ಸಾವಿಗೆ ನಿಖರ ಕಾರಣ ಇನ್ನೂ ಬಹಿರಂಗಪಡಿಸಿಲ್ಲ.
ಅನ್ವರ್ ಮಸೂದ್ ಅಜರ್ನ ಐವರು ಸಹೋದರರಲ್ಲಿ ಒಬ್ಬನೆಂದು ವರದಿಯಾಗಿದೆ.
ಆತ ಜೈಶ್-ಎ-ಮೊಹಮ್ಮದ್ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು ಭಯೋತ್ಪಾದಕ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.ಈಗ ಆತ ಪಾಕ್ ನಲ್ಲೇ ನಿಗೂಢವಾಗಿ ಮೃತಪಟ್ಟಿದ್ದಾನೆ.
