ಮೈಸೂರು: ಪರವಾನಗಿ ಭೂಮಾಪಕರು ತಮ್ಮ ಕೆಲಸವನ್ನು ಖಾಯಂಗೊಳಿಸಬೇಕು, ಸೇವಾ ಭದ್ರತೆ ನೀಡಬೇಕು ಮತ್ತು ಸಮಾನ ವೇತನ ನೀಡಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸರ್ವೆ ಅಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ.
ಈ ಮುಷ್ಕರಗಳಿಂದಾಗಿ ದೈನಂದಿನ ಭೂಮಾಪನ ಕಾರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಜತೆಗೆ ಭೂ ದಾಖಲೆಗಳ ತಿದ್ದುಪಡಿ ಮತ್ತು ಸರ್ವೆ ಕಾರ್ಯಗಳಲ್ಲಿ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ
ಮೈಸೂರು ಜಿಲ್ಲಾಧ್ಯಕ್ಷರಾದ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ಇಲಾಖೆಯ ಸಚಿವರು ಪರವಾನಗಿ ಭೂಮಾಪಕರ ಬೇಡಿಕೆ ಈಡೇರಿಕೆ ಬಗ್ಗೆ ಗಮನ ಹರಿಸಬೇಕೆಂದು ಸಂತೋಷ್ ಕುಮಾರ್ ಮನವಿ ಮಾಡಿದ್ದಾರೆ.
