ಮೈಸೂರು,ಎ.1: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏಪ್ರಿಲ್ 2 ರಂದು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಕರಾಮುವಿಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 233 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸುವರು.
ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್. ವೀಣಾ ಅವರು’ಮುಕ್ತಭಂಡಾರ’ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಶುಭ ಹಾರೈಸುವರು.
ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಎಸ್.ಕೆ ನವೀನ್ಕುಮಾರ್ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
