ಮೈಸೂರು: ಮೈಸೂರಿನ ಕುವೆಂಪು ನಗರದ ಶ್ರೀ ಶಿವಕುಮಾರ ಸ್ವಾಮೀಜಿಗಳ ವೃತ್ತದಲ್ಲಿ ಜಗದಾಂಬ ಪೆಟ್ರೋಲ್ ಬಂಕ್ ಅಭಿಮಾನಿಗಳ ವತಿಯಿಂದ ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತೋತ್ಸವ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶೀಗಳ ಅಭಿಮಾನಿ ಷಡಕ್ಷರಿ ರಜಿನಿ,
ಶಿವಕುಮಾರ ಸ್ವಾಮೀಜಿ ಸೂರ್ಯನಂತೆ ಎಲ್ಲರ ಮನೆ, ಮನಸ್ಸು ಬೆಳಗುವ ಮಹಾನ್ ಚೇತನ. ಶ್ರೀಗಳು ನಮ್ಮೊಂದಿಗೆ ಇಂದಿಗೂ ಇದ್ದಾರೆ, ಮುಂದೆಯೂ ಇರುತ್ತಾರೆ ಎಂದು ಹೇಳಿದರು.
ತ್ರಿವಿಧ ದಾಸೋಹಿಗಳಾದ ಡಾ.ಶಿವಕುಮಾರ ಸ್ವಾಮೀಜಿ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ. ಇಷ್ಟಲಿಂಗ ಪೂಜೆಯನ್ನು ಜಗತ್ತಿಗೆ ತೋರಿಸಿಕೊಟ್ಟವರು ಶಿವಕುಮಾರ ಸ್ವಾಮೀಜಿ. ಇಷ್ಟಲಿಂಗ ಪೂಜೆ
ಯನ್ನು ಇಷ್ಟಪಟ್ಟು ಮಾಡುತ್ತಲೇ ತಮ್ಮ ಶಕ್ತಿ ಪಡೆದುಕೊಳ್ಳುತ್ತಿದ್ದರು ಎಂದು ತಿಳಿಸಿದರು.
ನಗರ ಪಾಲಿಕೆ ಮಾಜಿ ಸದಸ್ಯರಾದ, ಜಗದೀಶ್ ಗುರುಸ್ವಾಮಿ ,ರವಿಕುಮಾರ್,
ಕಿರಣ್ ಕುಮಾರ್, ಕಡಕೋಳ ಜಗದೀಶ್, ಹೇಮಂತ್ ಕುಮಾರ್ ,ಆನಂದ್, ಮಂಜು, ಶಿವಣ್ಣ, ಮತ್ತಿತರ ಹಲವಾರು ಮಂದಿ ಭಕ್ತರು ಭಾಗಿಯಾಗಿದ್ದರು.
