ಮೈಸೂರು: ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು.
ಪಂಚಮುಖಿ ಆಂಜನೇಯ ಸ್ವಾಮಿಗೆ ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರು ಪಂಚಾಮೃತ ಅಭಿಷೇಕ ನೆರವೇರಿಸಿ, ಸ್ವಾಮಿಗೆ ಗಂಧದ ಅಲಂಕಾರ ಮಾಡಿದರು.
ವಿಶೇಷ ಪೂಜೆ ಸಲ್ಲಿಸಿದ ನಂತರ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರು ಮಹಾ ಮಂಗಳಾರತಿ ಮಾಡಿ,ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು
