ಇಂಡೋನೇಷ್ಯಾ: ಪೂರ್ವ ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಮನೆಗಳು ಕುಸಿದಿದೆ.
ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಮೊಲುಕ್ಕಾ ಸಮುದ್ರದಲ್ಲಿ ಸುಮಾರು 35 ಕಿಲೋಮೀಟರ್ ಆಳದಲ್ಲಿದೆಯಂತೆ.
ಬಲವಾದ ಕಂಪನಗಳ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದಿಂದ ಆಸ್ತಿ ಮತ್ತು ಜೀವಕ್ಕೆ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ,ಆದರೆ ಒಬ್ಬರು ಮೃತಪಟ್ಟಿದ್ದಾರೆ.
ಗುರುವಾರ ಬೆಳಿಗ್ಗೆ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ ಪ್ರದೇಶದಲ್ಲಿಯೂ ಭೂಕಂಪನದ ಅನುಭವವಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್ಸಿಎಸ್) ಮಾಹಿತಿಯ ಪ್ರಕಾರ, ಮುಂಜಾನೆ ಭೂಕಂಪ ಸಂಭವಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಉತ್ತರ ಭಾಗದಲ್ಲೂ ಕೂಡಾ ಲಘು ಭೂಕಂಪನದ ಅನುಭವವಾಗಿದೆ.
