ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲೂಕು ಬಸವನಗರ ಗ್ರಾಮದಲ್ಲಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು.
ಗ್ರಾಮದ ಶಾಲಾ ಮುಖ್ಯೋಪಾಧ್ಯಾಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮಧುರೇಶ್, ಕಾಯಕ ಸಮಾಜಗಳ ಒಕ್ಕೂಟದ ಸಂಚಾಲಕರಾದ ಕೊಣಸೂರು ಶಿವರಾಜ್, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘದ ಪದಾಧಿಕಾರಿಗಳಾದ ರಂಗಸ್ವಾಮಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಣ್ಣ ಸ್ವಾಮಿ ಮತ್ತು ರವಿ ಮತ್ತಿತರರು ಹಾಜರಿದ್ದರು.
