ಮೈಸೂರು: ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಯಿತು.
ಪೂಜಾ ಕಾರ್ಯದ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಇದೇ ವೇಳೆ ವಿಶೇಷ ಶ್ರೀ ಯೋಗಾನರಸಿಂಹಸ್ವಾಮಿ ಕ್ಯಾಲೆಂಡರ್ ಅನ್ನು ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಭಾಷ್ಯಂ ಸ್ವಾಮೀಜಿ ಬಿಡುಗಡೆ ಮಾಡಿದರು.
ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ರಘುಲಾಲ್ ಕಂಪನಿಯ ಮುಖ್ಯಸ್ಥರಾದ ರಾಘವನ್ ಅವರನ್ನು ಸ್ವಾಮೀಜಿ ಗೌರವಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ರಘುಲಾಲ್ ಕಂಪನಿಯ ಮುಖ್ಯಸ್ಥರಾದ ರಾಘವನ್, ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

