ಚಾಮರಾಜನಗರ: ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನಲ್ಲಿ ರೈತ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಅಹೋರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮೈಸೂರಿನ ಕನ್ನಡಾಂಬೆ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಂಡಿತ್ತು.
ಗುಂಡ್ಲುಪೇಟೆಯ ತಹಸಿದ್ಧಾರ್ ಕಚೇರಿ ಮುಂಭಾಗ ಧರಣಿ ನಡೆದಿದ್ದು ಕನ್ನಡಾಂಬೆ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಾಂಬೆ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ,ಅಕ್ರಮವಾಗಿ ನಡೆಸುತ್ತಿರುವ ಸಫಾರಿಯನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿದರು.
ಗುಂಡ್ಲುಪೇಟೆ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬೇಕು, ಎಂ ಸೆಂಡ್, ಜೆಲ್ಲಿ, ಇನ್ನಿತರ ಭೂ ಗಣಿಗಾರಿಕೆಯ ಸಂಪತ್ತು ಕೇರಳಕ್ಕೆ ಹೋಗುತ್ತಿರುವುದನ್ನ ರದ್ದುಗೊಳಿಸಬೇಕೆಂದು ಗುಂಡ್ಲುಪೇಟೆ ಶಾಸಕರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ಈ ಧರಣಿಯಲ್ಲಿ ಮೈಸೂರು ಹೃದಯವಂತರ ಬಳಗದ ಅಧ್ಯಕ್ಷ ಡಿಪಿಕೆ ಪರಮೇಶ್, ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
